ಕರ್ನಾಟಕದ ಹಿಜಾಬ್ ವಿವಾವದದ ಬಗ್ಗೆ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ವಸ್ತ್ರದ ವಿಚಾರದಲ್ಲಿ ಮಹಿಳೆಯರಿಗೆ ಸಂಪೂರ್ಣ ಹಕ್ಕಿದೆ. ಬಿಕಿನಿಯಿರಬಹುದು, ಜೀನ್ಸ್ ಇರಬಹುದು ಮತ್ತೊಂದು ಬಟ್ಟೆ ತೊಡುವುದನ್ನು ನಿರ್ಧರಿಸುವ ಹಕ್ಕು ಮಹಿಳೆಯರಿಗಿದೆ ಎಂದಿದ್ದರು. ಇದರ ಬೆನ್ನಲ್ಲೇ ರೇಣುಕಾಚಾರ್ಯ ವಿವಾದಿತ ಹೇಳಿಕೆಯನ್ನು ನೀಡಿದ್ದಾರೆ.
ಮಾರುತಿ ಸುಜ಼ುಕಿ ಬಲೆನೋ ಹೊಸ ಮಾಡೆಲ್ ವಿವರಗಳು ಬಹಿರಂಗ
ಮಹಿಳೆಯರ ಬಟ್ಟೆ ಅತ್ಯಾಚಾರಕ್ಕೆ ಪ್ರಚೋದನೆ ನೀಡುತ್ತದೆ ಮಹಿಳೆಯರ ಬಟ್ಟೆ ನೋಡಿ ಪುರುಷರು ಉದ್ವೇಗಕ್ಕೆ ಒಳಗಾಗುತ್ತಾರೆ ಎಂಬ ವಿವಾದಿತ ಹೇಳಿಕೆಯನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೀಡಿದ್ದಾರೆ.
ಬಿಕಿನಿ ಹಾಕುವುದು ಸಮಾಜಕ್ಕೆ ಕೊಡುಗೆಯೇ? ಈ ಬಗ್ಗೆ ಪ್ರಿಯಾಂಕ ಗಾಂಧಿ ಮಹಿಳೆಯರ ಬಳಿ ಕ್ಷಮೆ ಕೇಳಬೇಕು. ಅವರು ಸಮಾಜಕ್ಕೆ ಆದರ್ಶವಾಗಿರಬೇಕು, ಆದರೆ ಕಾಂಗ್ರೆಸ್ ನಾಯಕಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ರೇಣುಕಾಚಾರ್ಯ ಹೇಳಿಕೆಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.