alex Certify ಶಾಲೆಗಳಲ್ಲಿ ವಸ್ತ್ರಸಂಹಿತೆ ಪಾಲಿಸಲೇಬೇಕು: ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆ ನಾಯಕ ಆದಿತ್ಯ ಠಾಕ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ವಸ್ತ್ರಸಂಹಿತೆ ಪಾಲಿಸಲೇಬೇಕು: ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆ ನಾಯಕ ಆದಿತ್ಯ ಠಾಕ್ರೆ

ಮುಂಬೈ: ಶಾಲೆಗಳಲ್ಲಿ ವಸ್ತ್ರಸಂಹಿತೆ ನಿಯಮವಿದ್ದರೆ ಪಾಲಿಸಲೇಬೇಕು ಎಂದು ಮಹಾರಾಷ್ಟ್ರದ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಮಿತ್ರ ಪಕ್ಷ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಶಾಲೆಗಳಲ್ಲಿ ವಸ್ತ್ರಸಂಹಿತೆ ಪಾಲಿಸಬೇಕೆಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆಗೆ ಶಿವಸೇನೆ ಸರ್ಕಾರ ರಚಿಸಿದೆ. ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಅವರು, ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಮಾತ್ರ ಆದ್ಯತೆಯಾಗಿರಬೇಕು. ಧಾರ್ಮಿಕ ವಿಷಯಗಳನ್ನು ಶಾಲಾ-ಕಾಲೇಜುಗಳಿಗೆ ತರಬಾರದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಪರಿಸರ ಸಚಿವ ಆದಿತ್ಯ ಠಾಕ್ರೆ ಹಿಜಾಬ್ ವಿಚಾರವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ಶಾಲೆಯು ಅಧ್ಯಯನ ಮತ್ತು ಶಿಕ್ಷಣದ ಮೇಲೆ ಮಾತ್ರ ಗಮನಹರಿಸಬೇಕು. ಅಂತಹ ವಾದಗಳ ಮೇಲೆ ಅಲ್ಲ. ಶಾಲಾ-ಕಾಲೇಜುಗಳಿಗೆ ಸಮವಸ್ತ್ರವನ್ನು ನಿಗದಿಪಡಿಸಲಾಗಿದ್ದು, ಆ ನಿಯಮವನ್ನು ಪಾಲಿಸಬೇಕು. ಶೈಕ್ಷಣಿಕ ಕೇಂದ್ರಗಳಲ್ಲಿ ಶಿಕ್ಷಣಕ್ಕೆ ಮಾತ್ರ ಗಮನ ನೀಡಬೇಕು. ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಮತ್ತು ರಾಜಕೀಯ ವಿಷಯಗಳು ಬರಬಾರದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...