ಬೆಂಗಳೂರು: ಕಾಲೇಜ್ ಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಮತ್ತಷ್ಟು ಬಿಗಡಾಯಿಸಿದೆ. ವಿವಾದವೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಿದ್ಯಾರ್ಥಿನಿಯರು ಹೈಕೋರ್ಟ್ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.
ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಹಿಜಾಬ್ ಪರ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಮಧ್ಯಂತರ ಮೌಖೀಕ ಆದೇಶಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ತುರ್ತು ವಿಚಾರಣೆಗೆ ಅರ್ಜಿದಾರರು ಮನವಿ ಮಾಡಿದ್ದಾರೆ. ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಬಳಸದಂತೆ ಹೈಕೋರ್ಟ್ ಮೌಖಿಕ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆ ಮುಗಿಯುವವರೆಗೆ ಧಾರ್ಮಿಕ ಗುರುತು ಬಳಸದಂತೆ ಹೈಕೋರ್ಟ್ ಹೈಕೋರ್ಟ್ ತ್ರಿಸದಸ್ಯ ಪೀಠವು ಮೌಖಿಕ ಆದೇಶ ನೀಡಿದ್ದು, ಇದಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಲಾಗಿದೆ ಎನ್ನಲಾಗಿದೆ.