ಬಳ್ಳಾರಿ: ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಎರಡು ಕಾಲೇಜುಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಕಳೆದ ತಿಂಗಳು ಕೋವಿಡ್ ನಿಯಮ ಉಲ್ಲಂಘಿಸಿ ಎರಡು ಕಾಲೇಜುಗಳಲ್ಲಿ ಪರೀಕ್ಷೆ ನಡೆಸಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಸ್ಟ್ ಸ್ಕೂಲ್ ಆಫ್ ನರ್ಸಿಂಗ್, ನರ್ಸಿಂಗ್ ಎಜುಕೇಷನ್ ಟ್ರಸ್ಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಎರಡು ಕಾಲೇಜುಗಳು ನರ್ಸಿಂಗ್ ಪರೀಕ್ಷೆಗೆ ಅನುಮತಿ ನೀಡಿದ್ದರು. ಹೊರರಾಜ್ಯದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕಾಲೇಜುಗಳ ವಿರುದ್ಧ ಇದೀಗ ಕೌಲ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.