ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಹೈಸ್ಕೂಲು, ಕಾಲೇಜು ಆರಂಭಕ್ಕೆ ಸರ್ಕಾರ ಮುಂದಾಗಿದ್ದು, ಪೊಲಿಸ್ ಭದ್ರತೆಯಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸೋಮವಾರದಿಂದ 9, 10ನೇ ತರಗತಿಗಳು ಆರಂಭವಾಗಲಿವೆ. ಹಂತ ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧರಿಸಲಾಗಿದೆ. ರಾಜ್ಯಾದ್ಯಂತ ಮುಂಜಾಗೃತಾ ಕ್ರಮವಾಗಿ ಪೊಲೀಸರಿಗೆ ಫುಲ್ ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ತಿಳಿಸಲಾಗಿದೆ ಎಂದರು.
ಶಿಕ್ಷಕರ ಅಕ್ರಮ ನೇಮಕಾತಿಯಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರ ಬಂದ ನಾಯಕನಿಗೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದ ಬೆಂಬಲಿಗರು
ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಶಾಲೆಗಳ ಗುರುತು ಮಾಡಲಾಗಿದ್ದು, ಅಂತಹ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗುತ್ತಿದೆ. ಕೇಂದ್ರ ಪಡೆಯನ್ನೂ ಭದ್ರತೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.