ಕಾರವಾರ: ಸರ್ಕಾರಕ್ಕಾಗಿ ತ್ಯಾಗ ಮಾಡಿದವರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪಾತ್ರ ದೊಡ್ಡದು. ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯ ಕೂಡ ಆಗಿದೆ ಎಂದು ಹೇಳುವ ಮೂಲಕ ಸಚಿವ ಶಿವರಾಮ್ ಹೆಬ್ಬಾರ್ ಬ್ಯಾಟ್ ಬಿಸಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಸಚಿವರು, ಯಾರಿಗೆಲ್ಲ ಸಚಿವ ಸ್ಥಾನ ಕೊಡಬೇಕು ಎಂಬುದು ಸಿಎಂ ಹಾಗೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟ ವಿಚಾರ. ಆದರೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮ ಆಶಯವೂ ಆಗಿದೆ. ಬಿಜೆಪಿಗೆ ಬಂದ ಎಲ್ಲರೂ ಈ ವಿಚಾರವಾಗಿ ಬೆಂಬಲ ನೀಡುತ್ತಾರೆ. ನಾವು ಈ ಹಿಂದೆಯೂ ಆಪ್ತರಾಗಿದ್ದೆವು ಈಗಲೂ ಆಪ್ತರೆ ಇನ್ಮುಂದೆಯೂ ಆಪ್ತರಾಗಿಯೇ ಇರುತ್ತೇವೆ ಎಂದು ಹೇಳಿದರು.
ಫೆಬ್ರವರಿ 12ರಿಂದ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ ಮೊಘಲ್ ಗಾರ್ಡನ್
ಇದೇ ವೇಳೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಹೆಬ್ಬಾರ್, ಹಿಜಾಬ್ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ತಮ್ಮ ಮೂಗಿನ ನೇರಕ್ಕೆ ಆಪಾದನೆ ಮಾಡುತ್ತಿದ್ದಾರೆ. ಆ ಕಾರಣಕ್ಕೆ ಹೈಕೋರ್ಟ್ ತ್ರಿಸದಸ್ಯಪೀಠ ರಚನೆ ಮಾಡಿ ವಿಸ್ತೃತ ಚರ್ಚೆ ನಡೆಸಿದೆ. ನ್ಯಾಯಾಲಯದ ತೀರ್ಪು ಬರಲಿ, ಕೋರ್ಟ್ ತೀರ್ಪಿಗೆ ತಲೆಬಾಗುವುದು ನಮ್ಮೆಲ್ಲರ ಕರ್ತವ್ಯ ಹಾಗಾಗಿ ಈ ಬಗ್ಗೆ ಹೆಚ್ಚಿನ ಮಾತು ಬೇಡ ಎಂದರು.