alex Certify ಅಂಚೆ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಚೆ ಸೇರಿ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಕೆಳ ವಿಭಾಗದ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಅಂಚೆ ಸಹಾಯಕ/ ವಿಂಗಡಣೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಸಂಯೋಜಿತ ಉನ್ನತ ಮಾಧ್ಯಮಿಕ ಹಂತದ (10+2) ಪರೀಕ್ಷೆ-2021 ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ https://ssc.nic.in  ಮೂಲಕ ಅರ್ಜಿ  ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ವಿಜ್ಞಾನ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ್ದು, ಗಣಿತ ವಿಷಯ ಕಡ್ಡಾಯವಾಗಿ ಅಭ್ಯಸಿಸಿರಬೇಕು. ಟೈಪಿಂಗ್ 15 ನಿಮಿಷದಲ್ಲಿ 8 ಸಾವಿರ ಕೀಗಳ ಟೈಪಿಂಗ್ ಸಾಮಥ್ರ್ಯ ಹೊಂದಿರಬೇಕು.

ಉಳಿದ ಎಲ್ಲಾ ಹುದ್ದೆಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಟೈಪಿಂಗ್ 15 ನಿಮಿಷದಲ್ಲಿ 15 ಸಾವಿರ ಕೀಗಳ ಟೈಪಿಂಗ್ ಸಾಮಥ್ರ್ಯ ಹೊಂದಿರಬೇಕು.

ಅಭ್ಯರ್ಥಿಯು 01-01-2022 ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ರಿಂದ 27 ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ, ಪಿಡಬ್ಲ್ಯುಡಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ. ಗೆ ಸೇರಿದ ಅಭ್ಯರ್ಥಿಗಳಿಗೆ 100 ರೂ., ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪಿಡಬ್ಲ್ಯುಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಶುಲ್ಕವನ್ನು ಮಾರ್ಚ್ 7 ರ ಒಳಗೆ ಆನ್‍ಲೈನ್, ನೆಟ್ ಬ್ಯಾಂಕಿಂಗ್ ಅಥವಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚಲನ್ ಮುಖಾಂತರ ಶುಲ್ಕ ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗೆ https://ssc.nic.in ನ್ನು ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...