ಬೆಂಗಳೂರು: ಸಹಕಾರ ಸಂಘಗಳು ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡದೆ.
ಕೊರೋನಾ ಕಾರಣದಿಂದಾಗಿ ಸಹಕಾರ ಸಂಘಗಳ ಚುನಾವಣೆ ತಡೆ ಹಿಡಿಯಲಾಗಿತ್ತು. ಈಗ ಚುನಾವಣೆ ನಡೆಸಲು ಸಹಕಾರ ಚುನಾವಣಾ ಆಯೋಗದ ಆಯುಕ್ತರಿಗೆ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಸಹಕಾರ ಸಂಘಗಳು, ಸಹಕಾರಿ ಬ್ಯಾಂಕ್ ಗಳು, ಸೌಹಾರ್ದ ಸಹಕಾರ ಸಂಘಗಳಿಗೆ ಚುನಾವಣೆ ನಡೆಸಲು ಸಿದ್ಧತೆ ನಡೆಸುವಂತೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಕಾರಣದಿಂದಾಗಿ ಸಹಕಾರ ಸಂಘಗಳ ಚುನಾವಣೆಗೆ ತಡೆ ನೀಡಲಾಗಿತ್ತು. ಈಗ ಕೊರೋನಾ ಕಡಿಮೆಯಾಗಿ ನಿರ್ಬಂಧ ಸಡಿಲಿಕೆ ಮಾಡಿರುವುದರಿಂದ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ.