ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆಯ ಬಗ್ಗೆ ಫೆ. 14 ರಿಂದ ಗ್ರಾಹಕರಿಂದ ಆಹವಾಲು ಸ್ವೀಕರಿಸಲಿದೆ.
ಬೆಸ್ಕಾಂ ಪ್ರತಿ ಯೂನಿಟ್ ಗೆ 1.58 ರೂ. ಹೆಚ್ಚಳ ಮಾಡುವಂತೆ ಕೋರಿದೆ. ಅದೇ ರೀತಿ ಎಲ್ಲಾ ಎಸ್ಕಾಂಗಳು ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದಿಂದ ಎಲ್ಲ ಪ್ರಸ್ತಾವಗಳನ್ನು ಪರಿಶೀಲಿಸಿ ಏಪ್ರಿಲ್ ಇಲ್ಲವೇ ಮೇ ತಿಂಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಬೆಸ್ಕಾಂ ನಿಂದ ಯೂನಿಟ್ ಗೆ 1.35 ರೂ. ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ ಮಾಡಲಾಗಿತ್ತು. ಫೆಬ್ರವರಿ 14 ರಿಂದ 28 ರವರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಗ್ರಾಹಕರಿಂದ ಅಹವಾಲು ಸ್ವೀಕರಿಸಲಿದೆ. ವಿದ್ಯುತ್ ದರ ಪರಿಷ್ಕರಣೆ ಗಾಗಿ ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸಿರುವ ಪ್ರಸ್ತಾವನೆ ಅನ್ವಯ ಗ್ರಾಹಕರ ಅಹವಾಲು ಸ್ವೀಕರಿಸಿದ ಬಳಿಕ ವಿದ್ಯುತ್ ದರ ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.