alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 44,877 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 684 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 508665ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 537045 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 117591 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 41585711 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 49,16,801 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,72,81,49,447 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 14,15,279 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...