ಹಾಸನ: ಹಿಜಾಬ್ ವಿವಾದದ ಹಿಂದೆ ಯಾರಿದ್ದಾರೆ ಎಂಬುದರ ತನಿಖೆ ನಡೆಸಲಾಗುವುದು. ತನಿಖೆಯ ನಂತರ ಸತ್ಯಾಂಶ ಬಯಲಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಅರಸೀಕೆರೆಯಲ್ಲಿ ಮಾತನಾಡಿದ ಅವರು, ಏಕಾಏಕಿ ವಿವಾದ ಸೃಷ್ಟಿಯಾಗಿದ್ದು ಹೇಗೆ? ಯಾವ ವಿದ್ಯಾರ್ಥಿನಿಯರು ರೀ ಟ್ವೀಟ್ ಮಾಡಿದ್ದಾರೆ ಎಂಬುದು ಸೇರಿ ತನಿಖೆಯಿಂದ ಎಲ್ಲಾ ವಿಚಾರಗಳು ಬಯಲಿಗೆ ಬರುತ್ತದೆ ಎಂದು ಹೇಳಿದ್ದಾರೆ.