ರಾಹುಲ್ ಗಾಂಧಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ..? ಎಂದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಸಿಎಂ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಆರ್ಎಲ್ಡಿ ಮುಖ್ಯಸ್ಥ ಜಯಂತ್ ಚೌಧರಿ, ಸಿಎಂ ಅವಾಗವಾಗ ತನ್ನ ಬಾಯನ್ನು ಶುಚಿಗೊಳಿಸಬೇಕು ಎಂದು ಕಿಡಿಕಾರಿದ್ದಾರೆ. ಅಸ್ಸಾಂ ಸಿಎಂ ಅವಾಚ್ಯ ಶಬ್ಧ ಬಳಸುತ್ತಿದ್ದು, ಕಾಲಕಾಲಕ್ಕೆ ಬಿಜೆಪಿ ನಾಯಕರು ಬೇವಿನ ಎಲೆಯಿಂದ ಅಥವಾ ಅದರ ಕಡ್ಡಿಯಿಂದ ತಮ್ಮ ಬಾಯಿಯನ್ನು ಸ್ವಚ್ಛಗೊಳಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
BREAKING: ಬಿಜೆಪಿ ಶಾಸಕರ ಕಚೇರಿಗೆ ಕಲ್ಲು, ಕಿಟಕಿ ಗಾಜು ಪುಡಿಪುಡಿ
2016 ಮತ್ತು 2019 ರಲ್ಲಿ ಪಾಕಿಸ್ತಾನದಲ್ಲಿ ಭಾರತ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯ ಪುರಾವೆಗಳನ್ನು ಕೇಳಿದ್ದಕ್ಕಾಗಿ, ಶರ್ಮಾ ಈ ಹಿಂದೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇವರು ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆಯನ್ನು ಕೇಳಿದೆಯೇ..? ನಮ್ಮ ಸೇನೆಯಿಂದ ಪುರಾವೆ ಕೇಳಲು ನಿಮಗೆ ಯಾವ ಹಕ್ಕಿದೆ ? ಎಂದು ಶರ್ಮಾ ವಾಕ್ಪ್ರಹಾರ ನಡೆಸಿದ್ದರು.
ಅಸ್ಸಾಂ ಸಿಎಂ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಪ್ರತಿಪಕ್ಷ ನಾಯಕರು ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.