ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮೊದಲ ದಿನ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ವಿಚಾರ ತಾರಕಕ್ಕೆ ಏರಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ.
ಫೆ. 25 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದ್ದು, ಆಡಳಿತ ಪಕ್ಷದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಮೇಕೆದಾಟು ವಿಚಾರ, ನದಿ ಜೋಡಣೆ, ಜಿಪಂ -ತಾಪಂ ಚುನಾವಣೆ, ಹಿಜಾಬ್ ಮತ್ತು ಕೇಸರಿ ಶಾಲು ವಿಚಾರದ ಬಗ್ಗೆ ಚರ್ಚೆ ತಾರಕಕ್ಕೇರುವ ಸಾಧ್ಯತೆ ಇದೆ ಎನ್ನಲಾಗಿದೆ.