ಬೆಂಗಳೂರು: ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ಆರಂಭವಾಗಿದ್ದು, ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಸರ್ಕಾರದ ಸಮವಸ್ತ್ರ ಆದೇಶ ವಿವೇಚನಾರಹಿತವಾಗಿದೆ ಎಂದು ಹೇಳಿದ್ದಾರೆ.
ಶಾಲೆಗಳಲ್ಲಿ ಶಿಕ್ಷಣಕ್ಕೆ ಪೂರಕ ವಾತಾವರಣ ಕಲ್ಪಿಸುವಂತೆ ಶಾಲಾ ಅಭಿವೃದ್ಧಿ ಸಮಿತಿಗಳಿಗೆ ಸರ್ಕಾರ ಸೂಚಿಸಿದೆ. ಕೆಲವರ ಉಡುಪಿನಿಂದ ಸಮವಸ್ತ್ರ ಸಂಹಿತೆಗೆ ಧಕ್ಕೆಯಾಗಿದೆ. ಸರ್ಕಾರಿ ಶಾಲೆಗಳು ಸಮವಸ್ತ್ರ ಧರಿಸಬೇಕು, ಖಾಸಗಿ ಶಾಲೆಗಳು ಆಡಳಿತ ಮಂಡಳಿ ಸೂಚಿಸಿದ ಸಮವಸ್ತ್ರ ಧರಿಸಬೇಕು. ಪಿಯು ವಿದ್ಯಾರ್ಥಿಗಳು ಕಾಲೇಜು ಅಭಿವೃದ್ದಿ ಸಮಿತಿ ನಿರ್ಧರಿಸಿದ ಸಮವಸ್ತ್ರ ತೊಡಬೇಕು ಎಂದು ಉಲ್ಲೇಖಿಸಲಾಗಿದೆ. ಸರ್ಕಾರದ ಈ ಆದೇಶ ಸಂವಿಧಾನದ ವಿಧಿ 25(1)ರ ಉಲ್ಲಂಘನೆಯಾಗಿದೆ ಎಂದು ವಾದ ಮಂಡಿಸಿದ್ದಾರೆ.
ದಿನಕ್ಕೆ 12 ಗಂಟೆ ನಿದ್ರಿಸುವ ಅಖಿಲೇಶ್ 6 ಗಂಟೆ ಸ್ನೇಹಿತರ ಜೊತೆ ಮೋಜು ಮಸ್ತಿಯಲ್ಲಿ ಕಳೆಯುತ್ತಾರೆ: ಯುಪಿ ಸಿಎಂ ಯೋಗಿ ಆದಿತ್ಯನಾಥ್
ಇದಕ್ಕೆ ಪ್ರತಿಕ್ರಿಯಿಸಿರುವ ಸಿಜೆ ರಿತುರಾಜ್ ಅವಸ್ತಿ, ಸಂವಿಧಾನದ 25(1)ರಡಿ ಇರುವ ಹಕ್ಕುಗಳನ್ನು ಸಾರ್ವಜನಿಕ ಸುವ್ಯವಸ್ಥೆ ಕಾರಣಕ್ಕೆ ಮಾತ್ರ ನಿರ್ಬಂಧಿಸಬಹುದು. ಕಾಲೇಜು ಅಭಿವೃದ್ಧಿ ಮಂಡಳಿಗೆ ಸರ್ಕಾರ ಹೆಚ್ಚಿನ ಅಧಿಕಾರ ನೀಡಿದ್ದು, ಸಂವಿಧಾನದ 25(1) ವಿಧಿಯ ರಕ್ಷಣೆ ಹೊಣೆ ಸಮಿತಿಗೆ ನೀಡಿದೆ. ಸರ್ಕಾರದ ನಡೆ ಕಾನೂನುಬಾಹಿರ, ನೀವು ಹೇಳುತ್ತಿರುವ ಹಕ್ಕು ನಿರ್ಬಂಧರಹಿತ ಪರಿಪೂರ್ಣ ಹಕ್ಕೆ? ಸಂವಿಧಾನದ 25(1)ರಲ್ಲಿ ಮೂರು ಬಗೆಯ ನಿರ್ಬಂಧವಿದೆ. ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ, ಆರೋಗ್ಯದ ಪ್ರಶ್ನೆಯಿದ್ದರೆ ನಿರ್ಬಂಧ ವಿಧಿಸಲಾಗುವುದು. ಆದರೆ ಈ ಪ್ರಕರಣದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಕಾರಣಕ್ಕೆ ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸುವ್ಯವಸ್ಥೆ ಎಂದರೇನು? ಎಂಬುದನ್ನು ವಿವರಿಸುವಂತೆ ಸೂಚಿಸಿದ್ದಾರೆ.
ನ್ಯಾಯಮೂರ್ತಿಗಳ ಪ್ರಶ್ನೆಗಳಿಗೆ ಉತ್ತರಿಸಿದ ವಕೀಲ ದೇವದತ್ ಕಾಮತ್, ಮೆಡಿಕಲ್ ವಿದ್ಯಾರ್ಥಿನಿಯೋರ್ವರು ಪರೀಕ್ಷೆಗೆ ತೆರಳುವಾಗ ಹಿಜಾಬ್ ಗೆ ಅನುಮತಿ ನೀಡದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಬಗ್ಗೆ, ಷರಿಯಾ ಕಾನೂನಿನ ಬಗ್ಗೆ ತೀರ್ಪಿನಲ್ಲಿ ಉಲ್ಲೇಖದ ಬಗ್ಗೆ ಹಾಗೂ ಹದಿತ್, ಖುರಾನ್ ಕುರಿತ ಉಲ್ಲೇಖಗಳಿರುವ ಬಗ್ಗೆ ತಿಳಿಸಿದ್ದಾರೆ. ಪ್ರಮುಖವಾಗಿ ಕೇಂದ್ರೀಯ ವಿದ್ಯಾಲಯದ ಸುತ್ತೋಲೆಯನ್ನು ಸಲ್ಲಿಸಿದ ದೇವದತ್ ಕಾಮತ್, ಕೇಂದ್ರೀಯ ವಿದ್ಯಾಲಯದಲ್ಲಿ ಹಿಜಾಬ್ ಗೆ ಅವಕಾಶವಿದೆ ಎಂದು ವಾದ ಮಂಡಿಸಿದ್ದಾರೆ.