ಬೆಂಗಳೂರು: ಫೆಬ್ರುವರಿ 9 ರಿಂದ ರಜೆ ನೀಡಲಾಗಿದ್ದ ಪಿಯುಸಿ, ಪದವಿ ಕಾಲೇಜುಗಳು ನಾಳೆಯಿಂದ ಆರಂಭವಾಗಲಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿ ಸಂಘರ್ಷ ಆರಂಭವಾದ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿತ್ತು. ಫೆಬ್ರವರಿ 16 ರಿಂದ ಕಾಲೇಜುಗಳು ಆರಂಭವಾಗಲಿವೆ.
ಸಿಎಂ ನೇತೃತ್ವದ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಪಿಯುಸಿ ಮತ್ತು ಪದವಿ ಕಾಲೇಜುಗಳನ್ನು ಬುಧವಾರದಿಂದ ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಸಮವಸ್ತ್ರ ಜಾರಿಯಲ್ಲಿರುವ ಕಾಲೇಜುಗಳಲ್ಲಿ ಕಡ್ಡಾಯವಾಗಿ ನ್ಯಾಯಾಲಯದ ಆದೇಶ ಪಾಲಿಸಬೇಕಿದೆ. ಸಮವಸ್ತ್ರ ಇಲ್ಲದ ಕಡೆಗಳಲ್ಲಿ ಡ್ರೆಸ್ ಕೋಡ್ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ್ದಾರೆ.