ಬೆಂಗಳೂರು: ಆಸ್ತಿ ಖರೀದಿ, ಮಾರಾಟಗಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲ ಉಪನೋಂದಣಾಧಿಕಾರಿಗಳ ಕಚೇರಿ ವೇಳೆಯನ್ನು ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಉಪನೋಂದಣಾಧಿಕಾರಿಗಳ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಳಗ್ಗೆ 9 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಕಾರ್ಯನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನೋಂದಣಿ ಇಲಾಖೆ ಉಪಮಹಾಪರಿವೀಕ್ಷಕರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.