ನವದೆಹಲಿ: ಕರ್ನಾಟಕ, ಆಂಧ್ರಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದಲ್ಲಿ 60,000 ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಅಡಿಯಲ್ಲಿ 60 ಸಾವಿರ ಮನೆಗಳನ್ನು ನಿರ್ಮಿಸಲು ಅನುಮತಿ ನೀಡಲಾಗಿದೆ.
ಒಟ್ಟು 80 ಲಕ್ಷ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ 48 ಸಾವಿರ ಕೋಟಿ ರೂ. ಅನುದಾನ ಕಾಯ್ದಿರಿಸಿದೆ. 2024 ರ ವೇಳೆಗೆ ಎಲ್ಲಾ ಕಡುಬಡವರಿಗೆ ವಸತಿ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದ್ದು, ಇದರ ಭಾಗವಾಗಿ 60 ಸಾವಿರ ಮನೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಮೊದಲ ಹಂತದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ 5 ರಾಜ್ಯಗಳಲ್ಲಿ ಮನೆಗಳನ್ನು ನಿರ್ಮಿಸಲಾಗುವುದು. ಎಂದು ಹೇಳಲಾಗಿದೆ.