ಬೆಂಗಳೂರು: ದೇವಾಲಯಗಳಲ್ಲಿ ಜಾಗಟೆ, ಗಂಟೆಯಿಂದ ಶಬ್ದ ಮಾಲಿನ್ಯವಾಗುತ್ತದೆ ಎಂದು ನೀಡಲಾಗಿದ್ದ ನೋಟಿಸ್ ವಾಪಸ್ ಪಡೆಯಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾವರುನಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ದೇವಾಲಯಗಳಲ್ಲಿ ಜಾಗಟೆ, ಗಂಟೆ ಬಳಕೆಯಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ ಎನ್ನುವ ಕಾರಣಕ್ಕೆ ನೀಡಿದ್ದ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಸಿ.ಟಿ. ರವಿ ಮತ್ತು ರವಿಸುಬ್ರಹ್ಮಣ್ಯ ಅವರು ಈ ಬಗ್ಗೆ ಪ್ರಸ್ತಾಪಿಸಿದ್ದು, ಉತ್ತರ ನೀಡಿದ ಗೃಹ ಸಚಿವರು, ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶ ಹಿಂಪಡೆಯಲಾಗಿದೆ. ಗೊಂದಲ ಬೇಡ ಎಂದು ತಿಳಿಸಿದ್ದಾರೆ.
ನಿಗದಿತ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದ ಉಂಟು ಮಾಡುವ ಕಾರಣಕ್ಕೆ ಧಾರ್ಮಿಕ ಕೇಂದ್ರಗಳಿಗೆ ನೋಟಿಸ್ ನೀಡಲಾಗಿತ್ತು. ಯಾವುದೇ ಧರ್ಮ, ಸಮುದಾಯ ಗುರಿಯಾಗಿಸಿಕೊಂಡು ನೋಟಿಸ್ ಕೊಟ್ಟಿರಲಿಲ್ಲ. ಇದರಿಂದ ಗೊಂದಲ ಉಂಟಾದ ಹಿನ್ನೆಲೆಯಲ್ಲಿ ಆದೇಶ ವಾಪಸ್ ಪಡೆಯಲಾಗಿದೆ ಎಂದು ಸಚಿವರು ಹೇಳಿದ್ದಾರೆ.