ಬೆಂಗಳೂರು/ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದ ಪ್ರತಿಭಟನೆ ತೀವ್ರಗೊಂಡಿದ್ದು, ರಾಜಧಾನಿ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಹಿಜಾಬ್ ಸಂಘರ್ಷದ ವೇಳೆ ಮಾತನಾಡುತ್ತಾ ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದರು. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ಆರಂಭವಾಗಿದೆ.
ʼಕೋಟ್ಯಾಧಿಪತಿʼಯಾಗಬೇಕಾ…? ಹಾಗಾದ್ರೆ ಫಾಲೋ ಮಾಡಿ ಈ ಟಿಪ್ಸ್
ಇನ್ನೊಂದೆಡೆ ಸಚಿವ ಈಶ್ವರಪ್ಪ ಅವರ ಭಾವಚಿತ್ರ ಹರಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಗಾಂಧಿಭವನ ರಸ್ತೆಯಲ್ಲಿರುವ ಸಚಿವ ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.