ವಿಧಾನಸಭೆಯಲ್ಲಿ ಮಾತಾಡಿದ ಉನ್ನತ ಶಿಕ್ಷಣ ಸಚಿವ ಸಿ.ಎನ್ ಅಶ್ವಥ್ ನಾರಾಯಣ್, ಪ್ರಸ್ತುತ ಇರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಪ್ರವೇಶ ಪಡೆಯದ ಕಾರಣ, ಕರ್ನಾಟಕ ಸರ್ಕಾರ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಕಡ್ಡಿ ತುಂಡು ಮಾಡುವಂತೆ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸಿಂದಗಿ ಬಿಜೆಪಿ ಶಾಸಕ ರಮೇಶ ಭೂಸನೂರ್ ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮಾತಾಡಿದ್ರು. ಈ ವೇಳೆ ತಮ್ಮ ಕ್ಷೇತ್ರದಲ್ಲಿ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನಿರ್ಮಿಸುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶ್ವಥ್ ನಾರಾಯಣ. ಇದು ಸಾಧ್ಯವೇ ಇಲ್ಲ ಎಂದಿದ್ದಾರೆ. ಪ್ರಸ್ತುತ ಇರೋ ಕಾಲೇಜುಗಳಿಗೆ ಸಾಕಷ್ಟು ಪ್ರವೇಶ ಸಿಗದ ಕಾರಣ ಕರ್ನಾಟಕ ಹೊಸ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
BIG NEWS: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪೊಲೀಸ್ ವಶಕ್ಕೆ
ರಾಜ್ಯದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಡ್ಮಿಷನ್ ಪಾತಾಳಕ್ಕೆ ಕುಸಿದಿದೆ. ಹೀಗಿರುವಾಗ ಹೊಸ ಕಾಲೇಜುಗಳನ್ನು ಆರಂಭಿಸುವ ಪ್ರಶ್ನೆಯೇ ಇಲ್ಲ. ವಿಜಯಪುರ ಜಿಲ್ಲೆಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇ 50 ರಿಂದ 75ರಷ್ಟು ಸೀಟುಗಳು ಖಾಲಿ ಇವೆ. ಅದಕ್ಕಾಗಿಯೇ ನಾವು ಹೊಸ ಕಾಲೇಜು ತೆರೆಯುವ ಬಗ್ಗೆ ಯೋಚಿಸುತ್ತಿಲ್ಲ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ, ಹೊಸ ಕಾಲೇಜು ತೆರೆಯುವ ಬದಲು ಪ್ರಸ್ತುತ ಇರುವ ಕಾಲೇಜುಗಳ ಅಭಿವೃದ್ಧಿಯ ಕಡೆ ಗಮನಹರಿಸುತ್ತಿದ್ದೇವೆ. ಕರ್ನಾಟಕವು 15 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಹೊಂದಿದೆ. ಈ ಶೈಕ್ಷಣಿಕ ವರ್ಷದಲ್ಲಿ, ಎಲ್ಲಾ ವರ್ಗದ ಕಾಲೇಜುಗಳಲ್ಲಿ 23,000 ಎಂಜಿನಿಯರಿಂಗ್ ಸೀಟುಗಳು ಖಾಲಿ ಉಳಿದಿವೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಮಾನದಂಡಗಳ ಪ್ರಕಾರ ಸರ್ಕಾರವು ಅಸ್ತಿತ್ವದಲ್ಲಿರುವ ಎಂಜಿನಿಯರಿಂಗ್ ಕಾಲೇಜುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ಅವುಗಳನ್ನು ಬಲಪಡಿಸುತ್ತಿದೆ ಎಂದು ಅಶ್ವತ್ಥ್ ನಾರಾಯಣ್ ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.