ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 28ರವರೆಗೆ ನಿಷೇಧಾಜ್ಞೆ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಹರಡದಂತೆ ಮುಂಜಾಗೃತಾ ಕ್ರಮವಾಗಿ ಬೆಂಗಳೂರಿನಲ್ಲಿ ವಿಧಿಸಲಾಗಿದ್ದ 144 ಸೆಕ್ಷನ್ ಅನ್ನು ಫೆ.28ರವರೆಗೆ ವಿಸ್ತರಿಸಲಾಗಿದೆ. ಜನರು ಒಂದೆಡೆ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ, ಧರಣಿಗೆ ಯಾವುದೇ ರೀತಿ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಒಳಾಂಗಣ ಸಮಾರಂಭಗಳಿಗೆ 200 ಜನ, ಹೊರಾಂಗಣಕ್ಕೆ 300 ಜನರನ್ನು ನಿಗದಿ ಪಡಿಸಲಾಗಿದೆ. ಕ್ರೀಡಾ ಸಂಕಿರ್ಣ, ಮೈದಾನಗಳಿಗೆ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶವಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.