ಅಹಮದಾಬಾದ್; 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿ ಆದೇಶ ಹೊರಡಿಸಿದೆ.
ಪ್ರಕರಣದ 49 ಅಪರಾಧಿಗಳ ಪೈಕಿ ಬರೋಬ್ಬರಿ 38 ಅಪರಾಧಿಗಳಿಗೆ ಮರಣದಂಡನೆ ವಿಧಿಸಿರುವ ನ್ಯಾಯಾಲಯ, 11 ದೋಷಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
BIG BREAKING: ಸಂಧಾನ ಸಭೆ ವಿಫಲ; ವಿಧಾನಸಭೆ ಕಲಾಪವೂ ಸೋಮವಾರಕ್ಕೆ ಮುಂದೂಡಿಕೆ
2008, ಜುಲೈ 8ರಂದು ಅಹಮದಾಬಾದ್ ನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 56 ಜನರು ಸಾವನ್ನಪ್ಪಿದ್ದರು. ಘಟನೆಯಲ್ಲಿ 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಒಟ್ಟು 78 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಸುದೀರ್ಘ ವಿಚಾರಣೆ ಬಳಿಕ ಗುಜರಾತ್ ವಿಶೇಷ ನ್ಯಾಯಾಲಯ ಅಪರಾಧಿಗಳಿಗೆ ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, 38 ಅಪರಾಧಿಗಳಿಗೆ ಗಲ್ಲುಶಿಕ್ಷೆ ಹಾಗೂ 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.