ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಈಶ್ವರಪ್ಪ ಗೂಂಡಾಗಳಿಗೆ ಜಗದ್ಗುರು ಇದ್ದಂತೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ದೇಶದ ಅನೈತಿಕ ಚಟುವಟಿಕೆಗಳ ಗುರು ಈಶ್ವರಪ್ಪ. ಪ್ರಚೋದನಕಾರಿ ಹೇಳಿಕೆಗಳನ್ನು ಕೊಟ್ಟು ಗೂಂಡಾ ಪ್ರವೃತ್ತಿ ಮೆರೆಯುತ್ತಿದ್ದಾರೆ. ಸಚಿವ ಈಶ್ವರಪ್ಪ ಗೂಂಡಾಗಳಿಗೆ ಜಗದ್ಗುರು ಎಂದು ವಾಗ್ದಾಳಿ ನಡೆಸಿದರು.
ರಾಷ್ಟ್ರಧ್ವಜ ಇರುವ ಕಡೆ ಕೇಸರಿ ಧ್ವಜ ಹಾರಿಸ್ತಾರಂತೆ. ಅಂದ್ರೆ ಏನರ್ಥ ರಾಷ್ಟ್ರಧ್ವಜವನ್ನು ಒಪ್ಪಲ್ಲ ಎಂದು ಹೇಳುತ್ತಿದ್ದಾರೆ. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.