ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ.
ಈಗಾಗಲೇ ವಿವಿಧ ಇಲಾಖೆಗಳಿಂದ ಬಜೆಟ್ ಪೂರ್ವಭಾವಿಯಾಗಿ ಪ್ರಸ್ತಾವನೆ ಸ್ವೀಕರಿಸಿರುವ ಸಿಎಂ, ವಿವಿಧ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಜೆಟ್ ನಲ್ಲಿ ವಿವಿಧ ಯೋಜನೆಗಳಿಗೆ ಅನುದಾನ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ.
ಮಾರ್ಚ್ 4 ಅಥವಾ 7 ರಂದು ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡಿಸುವ ಬಗ್ಗೆ ಚರ್ಚೆ ನಡೆದಿದ್ದು, ದಿನಾಂಕವನ್ನು ಅಂತಿಮಗೊಳಿಸಿಲ್ಲ ಎಂದು ಹೇಳಲಾಗಿದೆ.