ಬೆಂಗಳೂರು: ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಫೋಟೋ ತೆಗೆಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರಿನ ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮಲ್ಲಿಕಾರ್ಜುನಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಅವರು ಈ ಕುರಿತಾಗಿ ಅಧಿಸೂಚನೆ ಹೊರಡಿಸಿದ್ದಾರೆ.
ರಾಯಚೂರು ನ್ಯಾಯಾಲಯದಲ್ಲಿ ಜನವರಿ 26 ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆಗೆಸಿ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ದೇಶಾದ್ಯಂತ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಪ್ರತಿಭಟನೆ ನಡೆದಿತ್ತು.