ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ.
ಒಬ್ಬ ಭಯೋತ್ಪಾದಕ ಕೊಲ್ಲಲ್ಪಟ್ಟಿದ್ದು. ಉಳಿದವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೋರಾ ಪ್ರದೇಶದ ಚೆರ್ಮಾರ್ಗ್ ಗ್ರಾಮದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಪ್ರಾರಂಭವಾಯಿತು. ಎರಡರಿಂದ ಮೂರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.
ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಈ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಚೆರ್ಮಾರ್ಗ್ ಗ್ರಾಮದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಬೆಳಗಿನ ಜಾವದಿಂದ ಪ್ರಾರಂಭಿಸಿತು ಎಂದು ತಿಳಿಸಿದ್ದಾರೆ.
ಜಂಟಿ ಶೋಧ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ, ಗುಂಡಿನ ಚಕಮಕಿ ನಡೆದು ಎನ್ ಕೌಂಟರ್ ನಡೆಸಲಾಯಿತು ಎಂದು ಅವರು ಹೇಳಿದರು.