ಬೆಂಗಳೂರು: ಸದನದಲ್ಲಿ ಕಾಂಗ್ರೆಸ್ ಸದಸ್ಯರ ಧರಣಿ ವಿಚಾರವಾಗಿ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಆಡಳಿತ ಪಕ್ಷದಲ್ಲಂತು ಇಲ್ಲ, ವಿಪಕ್ಷ ಸ್ಥಾನದಲ್ಲಿದ್ದು ಕೆಲಸ ಮಾಡುವ ನೈತಿಕತೆಯನ್ನೂ ಕಳೆದುಕೊಂಡಿದೆ ಎಂದು ಗುಡುಗಿದ್ದಾರೆ.
ಬರೋಬ್ಬರಿ 74 ವರ್ಷಗಳ ಬಳಿಕ ಮತ್ತೆ ಒಂದಾದ ಕುಟುಂಬ….!
ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ದೇಶದ್ರೋಹಿ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಉಭಯ ಸದನಗಳ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ವಿಪಕ್ಷ ಕಾಂಗ್ರೆಸ್ ನಡೆಗೆ ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.