alex Certify ಉತ್ತರ ಕರ್ನಾಟಕದ ಜನತೆಗೆ ಭರ್ಜರಿ ‘ಬಂಪರ್’ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕದ ಜನತೆಗೆ ಭರ್ಜರಿ ‘ಬಂಪರ್’ ಸುದ್ದಿ

ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಸಹ ಉತ್ತರ ಕರ್ನಾಟಕವನ್ನು ನಿರ್ಲಕ್ಷ ಮಾಡಲಾಗುತ್ತದೆ ಎಂಬ ಕೂಗು ಕೇಳಿ ಬರುತ್ತದೆ. ಈಗ ಉತ್ತರ ಕರ್ನಾಟಕದವರೇ ಆದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಅವರು ಆ ಭಾಗದ ಜನತೆಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ಶನಿವಾರದಂದು ತಮ್ಮನ್ನು ಭೇಟಿ ಮಾಡಿದ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ನಿಯೋಗದೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನತೆಯ ಅನುಕೂಲಕ್ಕಾಗಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೂರು ಎಕರೆ ಜಮೀನು ಮಂಜೂರು ಮಾಡುವುದಾಗಿ ಭರವಸೆ ನೀಡಿದ್ದಾರೆ.

ಈ ಜಮೀನಿನಲ್ಲಿ ಉತ್ತರ ಕರ್ನಾಟಕದಿಂದ ಬರುವ ಜನರ ಅನುಕೂಲಕ್ಕಾಗಿ ಕಟ್ಟಡ, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಸತಿ ನಿಲಯ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಜಮೀನು ಮಂಜೂರಾತಿ ಕುರಿತಂತೆ ಶೀಘ್ರದಲ್ಲೇ ಆದೇಶ ಹೊರಡಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...