ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಇನ್ನೂ ಮುಂದುವರಿದಿದೆ. ಸದ್ಯ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ಅಂತಿಮ ತೀರ್ಪು ಹೊರ ಬೀಳುವವರೆಗೆ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕತೆ ಬಿಂಬಿಸುವ ಉಡುಪು ಧರಿಸುವಂತಿಲ್ಲ ಎಂದು ನ್ಯಾಯಾಲಯ ಮಧ್ಯಂತರ ಆದೇಶ ನೀಡಿದೆ.
ಇದರ ಮಧ್ಯೆಯೂ ಕೆಲ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದು, ಅವರುಗಳಿಗೆ ತರಗತಿ ಪ್ರವೇಶಿಸಲು ಅವಕಾಶ ಸಿಕ್ಕಿಲ್ಲ. ಆದರೆ ಕುಂಕುಮ, ಬಳೆ ಧರಿಸಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಿಸಲು ಅನುಮತಿ ನೀಡಲಾಗುತ್ತಿದೆಯಲ್ಲ ಎಂದು ಕೆಲವರು ಪ್ರಶ್ನಿಸಿದ್ದಾರೆ.
ಈ ಕುರಿತು ಬಾಗಲಕೋಟೆಯಲ್ಲಿ ಮಾತನಾಡಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಕುಂಕುಮ, ವಿಭೂತಿ ಹಚ್ಚಿಕೊಳ್ಳುವುದರ ಹಿಂದೆ ವೈಜ್ಞಾನಿಕ ಕಾರಣಗಳಿವೆ. ಅಲ್ಲದೆ ಇದು ಈ ದೇಶದ ಸಂಸ್ಕೃತಿ, ಸಂಪ್ರದಾಯವಾಗಿದ್ದು ಇವುಗಳ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳಬೇಕಾಗುತ್ತದೆ ಹುಷಾರ್ ಎಂದು ಎಚ್ಚರಿಸಿದ್ದಾರೆ.