ಶಿವಮೊಗ್ಗ: ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡುತ್ತಿದ್ದ ಯುವಕ ಸ್ನೇಹಿತನೊಂದಿಗೆ ಸೇರಿ ಮಹಿಳೆ ಮಗನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಶಿವಮೊಗ್ಗದ ಟಿಪ್ಪು ನಗರದಲ್ಲಿ ಘಟನೆ ನಡೆದಿದೆ. ಮಹಿಳಾ ಸ್ನಾನ ಮಾಡುವ ಸಂದರ್ಭದಲ್ಲಿ ಬಾತ್ರೂಮ್ ವೆಂಟಿಲೇಟರ್ ನಿಂದ ಕದ್ದು ನೋಡಿದ್ದಾನೆ. ಇದನ್ನು ಗಮನಿಸಿದ ಮಹಿಳೆ ಕೂಗಾಡಿದ್ದಾರೆ. ಕೂಗಾಟ ಕೇಳಿದ ಅಕ್ಕಪಕ್ಕದವರು ಓಡಿ ಹೋಗಲೆತ್ನಿಸಿದ ಎಂಬ ಯುವಕನನ್ನು ಹಿಡಿದು ಪ್ರಶ್ನಿಸಿ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ.
ಶುಕ್ರವಾರ ರಾತ್ರಿ ತನ್ನ ಸಹಚರನೊಂದಿಗೆ ಮಹಿಳೆ ಮನೆಯ ಬಳಿ ಬಂದ ಯುವಕ ಜಗಳವಾಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದ ಮಹಿಳೆ ಮಗನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಗಾಯಗೊಂಡ ಮಹಿಳೆಯ ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.