ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಗೋವಾ ಕಾಂಗ್ರೆಸ್ ಮಹದಾಯಿ ನೀರು ಕರ್ನಾಟಕಕ್ಕೆ ಕೊಡದಿರುವ ಬಗ್ಗೆ ಪ್ರಸ್ತಾಪಿಸಿತ್ತು. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯಕ್ಷ ಡಾ.ರವಿಶಟ್ಟಿ ಬೆಂದೂರು, ನಾಗಮಂಗಲ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಫೆ.14ರಂದು ಪ್ರತಿಭಟನೆ ನಡೆಸಲಾಗಿತ್ತು.
ಅನುಮತಿ ಪಡೆಯದೇ ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆ ಮುಖ್ಯಪೇದೆ ಮಂಜುನಾಥ್ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪ್ರತಿಭಟನೆ ನಡೆಸಿದ್ದ 6 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.