ಬೆಂಗಳೂರು: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 21 ರಿಂದ ಆರಂಭವಾಗಲಿದೆ. ಯಾವುದೇ ಕಾರಣದಿಂದ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಲ್ಲ. ಪರೀಕ್ಷೆಗೆ ಗೈರು ಹಾಜರಾದರೆ ಮತ್ತೆ ಅವಕಾಶ ಇಲ್ಲದ ಕಾರಣ ಇಂದು ಪರೀಕ್ಷೆಗೆ ವಿದ್ಯಾರ್ಥಿನಿಯರು ಹಾಜರಾಗುತ್ತಾರೆಯೇ ಇಲ್ಲವೇ ಎನ್ನುವುದು ಕುತೂಹಲ ಮೂಡಿಸಿದೆ.
ಪ್ರಾಯೋಗಿಕ ಪರೀಕ್ಷೆಗೆ 30 ಅಂಕ, ಥಿಯರಿಗೆ 70 ಅಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 16 ರಿಂದ ಮೇ 6 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.