ವಿಶಾಖಪಟ್ಟಣ: ಆಂಧ್ರಪ್ರದೇಶದ ಕೈಗಾರಿಕೆ, ವಾಣಿಜ್ಯ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಮೇಕಪತಿ ಗೌತಮ್ ರೆಡ್ಡಿ ಇಂದು ಕೊನೆಯುಸಿರೆಳೆದಿದ್ದಾರೆ.
ಭಾನುವಾರ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗೌತಮ್ ರೆಡ್ಡಿ ನಿನ್ನೆಯಷ್ಟೇ ದುಬೈನಿಂದ ಭಾರತಕ್ಕೆ ಬಂದಿದ್ದರು. ನೆಲ್ಲೂರು ಜಿಲ್ಲೆಯ ಆತ್ಮಕೂರ್ ವಿಧಾನಸಭಾ ಕ್ಷೇತ್ರವನ್ನು ಎರಡನೇ ಬಾರಿಗೆ ಪ್ರತಿನಿಧಿಸುವ ಆಂಧ್ರಪ್ರದೇಶದ ವಿಧಾನಸಭೆಯ ಸದಸ್ಯರಾದ ಮೇಕಪತಿ ಗೌತಮ್ ರೆಡ್ಡಿ ಮುಂಜಾನೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಟುಂಬ ಸದಸ್ಯರು ಹೈದರಾಬಾದ್ನಲ್ಲಿದ್ದಾರೆ.