ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಒಂದು ವಾರದೊಳಗೆ ಚಾಲನೆ ನೀಡಲಾಗುತ್ತದೆ. ಶಿಕ್ಷಣ ಇಲಾಖೆ 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಅನುಮತಿ ಪಡೆದುಕೊಂಡಿದೆ. ವಾರದಲ್ಲೇ ನೇಮಕಾತಿಗೆ ಸಿಇಟಿ ದಿನಾಂಕ ಘೋಷಣೆ ಮಾಡಲಿದೆ
ಕೊರೋನಾ, ಅತಿವೃಷ್ಟಿ, ಆರ್ಥಿಕ ಮಿತವ್ಯಯ. ಶೈಕ್ಷಣಿಕ ಅನಿಶ್ಚಿತತೆ ಮೊದಲಾದ ಕಾರಣಗಳಿಂದ 2018ರ ನಂತರ ಶಿಕ್ಷಕರ ನೇಮಕಾತಿ ನಡೆದಿರಲಿಲ್ಲ. ಶೀಘ್ರವೇ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಲಾಗುತ್ತದೆ. ಒಂದು ವಾರದಲ್ಲಿಯೇ ದಿನಾಂಕ ಘೋಷಣೆ ಮಾಡಲಾಗುವುದು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಕೇಂದ್ರೀಕರಿಸಿ 7 ಜಿಲ್ಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಹೇಳಲಾಗಿದೆ.