ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖಲಿಸ್ತಾನ್ ಪರ ಕಾರ್ಯಕರ್ತರಿಂದ ಜೀವ ಬೆದರಿಕೆ ಕರೆ ಇರುವ ಹಿನ್ನೆಲೆಯಲ್ಲಿ ಜೈಲಿನಿಂದ ಹೊರ ಬಂದಿರುವ ರಾಮ್ ರಹೀಮ್ ಸಿಂಗ್ ಗೆ ಜೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ.
ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಡಿಯಲ್ಲಿ ಶಿಕ್ಷೆಗೆ ಒಳಗಾದ ನಾಯಕನಿಗೆ ಉನ್ನತ ಮಟ್ಟದ ಭದ್ರತೆಯನ್ನು ನೀಡಲು ಹರಿಯಾಣ ಸರ್ಕಾರದ ನಿರ್ಧರಿಸಿದೆ. ಸ್ವಯಂ ಘೋಷಿತ ದೇವ ಮಾನವ ರಾಮ್ ರಹೀಮ್ ಸಿಂಗ್ ಪೆರೋಲ್ ಮೂಲಕ ಹೊರ ಬಂದಿದ್ದಾರೆ.
ಮಾಜಿ ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಹಾಗೂ ಇಬ್ಬರು ಡೇರಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಸ್ತುತ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್ ಫೆಬ್ರವರಿ 7ರಂದು 14 ದಿನಗಳ ಪೆರೋಲ್ನ ಅಡಿಯಲ್ಲಿ ರೋಹ್ಟಕ್ನಲ್ಲಿರುವ ಸುನಾರಿಯಾ ಜೈಲಿನಿಂದ ಹೊರಬಂದಿದ್ದಾರೆ.
2017 ರಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ಈ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.