ಅಲ್ಲು ಅರ್ಜುನ್ ಅವರ ಪುಷ್ಪ ಸಿನಿಮಾ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವುದು ನಿಮಗೆ ಗೊತ್ತೇ ಇದೆ. ಚಿತ್ರದ ಹಾಡುಗಳಿಂದ ಹಿಡಿದು ಡೈಲಾಗ್‌ಗಳವರೆಗೆ ಎಲ್ಲವೂ ಸೂಪರ್ ಹಿಟ್ ಆಗಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳು, ಕ್ರಿಕೆಟಿಗರು, ಎಲ್ಲರೂ ಪುಷ್ಪಾ ಸಿನಿಮಾದ ಹಾಡುಗಳಿಗೆ ನೃತ್ಯ ಮಾಡುತ್ತಿರುವ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಹಾಗೆಯೇ ಡೈಲಾಗ್ ಗಳಿಗೆ ಲಿಪ್ ಸಿಂಕ್ ಕೂಡ ಮಾಡಿದ್ದಾರೆ.
ಇದೀಗ, ಕ್ರಿಕೆಟಿಗ ಯುಜ್ವೇಂದ್ರ ಚಹಾಲ್ ಅವರು ಮತ್ತು ತಂಡದ ಆಟಗಾರರಾದ ನವದೀಪ್ ಸೈನಿ ಮತ್ತು ಹರ್‌ಪ್ರೀತ್ ಬ್ರಾರ್ ಅವರು ಅಲ್ಲು ಅರ್ಜುನ್ ಅವರ ವೈರಲ್ ಡೈಲಾಗ್ ಫ್ಲವರ್ ಸಮ್ಜೆ ಕ್ಯಾ ಡೈಲಾಗ್ ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ವಿಡಿಯೋದಲ್ಲಿ, ಯುಜ್ವೇಂದ್ರ ಚಹಾಲ್, ನವದೀಪ್ ಸೈನಿ ಮತ್ತು ಹರ್‌ಪ್ರೀತ್ ಬ್ರಾರ್ ಅವರು ಇತರ ಸಹ ಆಟಗಾರರೊಂದಿಗೆ ಬಸ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು. ಈ ವೇಳೆ ಅವರು ಈ ಸಿನಿಮಾದ ಪ್ರಸಿದ್ಧ ಡೈಲಾಗ್ ಅನ್ನು ಹೇಳಿದ್ದಾರೆ.
ವೈರಲ್ ಆದ ವಿಡಿಯೋವನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದು, ಕಾಮೆಂಟ್‌ಗಳ ವಿಭಾಗವು ಫೈರ್ ಎಮೋಜಿಗಳಿಂದ ತುಂಬಿದೆ.
ಶ್ರೀಲಂಕಾ ವಿರುದ್ಧದ ಟಿ-20 ಸರಣಿಗಾಗಿ ಭಾರತ ಕ್ರಿಕೆಟ್ ತಂಡ ಪ್ರಸ್ತುತ ಲಕ್ನೋದಲ್ಲಿದೆ. ಫೆಬ್ರವರಿ 24 ರಂದು ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಆಡಲಿದೆ.
https://youtu.be/UTTsBiAvUrc