ತುಮಕೂರು: ಪತಿಯ ಕುಡಿತದ ಚಟಕ್ಕೆ ಮನನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡಾದಲ್ಲಿ ನಡೆದಿದೆ.
ಬುಜ್ಜಿ ಬಾಯಿ (35) ಹಾಗೂ ಮಕ್ಕಳಾದ ಖುಷಿ (9), ಹರ್ಷಿತಾ (6) ಮೃತರು. ಬುಜ್ಜಿ ಬಾಯಿ ಪತಿ ದಿನವೂ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಇಬ್ಬರು ಹೆಣ್ಣು ಮಕ್ಕಳ ಜತೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಿರುಮಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಹಾಗೂ ಮಕ್ಕಳ ಶವಕ್ಕಾಗಿ ಹುಡುಕಾಟ ನಡೆದಿದೆ.