ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಗಲಭೆ ಉಂಟಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಜಾರಿಗೊಳಿಸಲಾಗಿದ್ದ ಕರ್ಫ್ಯೂ ಸೋಮವಾರ ಬೆಳಗ್ಗೆ 6 ಗಂಟೆಗೆ ಅಂತ್ಯವಾಗಿದೆ.
ಸೋಮವಾರದಿಂದ ಶಾಲೆ-ಕಾಲೇಜುಗಳು ಪುನರಾರಂಭವಾಗಲಿದೆ. ಕರ್ಫ್ಯೂ ಹಿಂಪಡೆಯಲಾಗಿದ್ದು, ಮಾರ್ಚ್ 4 ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಲಾಗಿದೆ. ತುರ್ತು ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ತಿಳಿಸಿದ್ದಾರೆ.
ಶಿವಮೊಗ್ಗದ ಸೂಕ್ಷ್ಮ ಪ್ರದೇಶಗಳು, ಪ್ರಮುಖ ಸರ್ಕಲ್, ಗಲಭೆ ನಡೆದ ಸ್ಥಳಗಳು, ಮಂದಿರ, ಮಸೀದಿಗಳ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.