ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಉಕ್ರೇನ್ ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ, ವಿದ್ಯಾರ್ಥಿಗಳಿಗೆ ಮುಂದಿನ ಪ್ರಯಾಣಕ್ಕೆ ಇದು ಅನುವು ಮಾಡಿಕೊಡುತ್ತದೆ ಎಂದು ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಟ್ವೀಟ್ ಮಾಡಿದ್ದು ಯುದ್ಧ ಭೂಮಿಯಲ್ಲಿ ಸಿಲುಕಿರುವ ಸಾಕಷ್ಟು ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
ಉಕ್ರೇನ್ ರಾಜಧಾನಿ ಕೈವ್ನಲ್ಲಿ ವಿಕೇಂಡ್ ಕರ್ಫ್ಯೂವನ್ನು ರದ್ದುಗೊಳಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಪಾಶ್ಚಿಮಾತ್ಯಗಳಿಗೆ ಪ್ರಯಾಣ ಬೆಳೆಸಲು ರೈಲು ನಿಲ್ದಾಣಕ್ಕೆ ತೆರಳಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿಯು ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಹಾಯ ಮಾಡಲು ಕೇಂದ್ರ ಸರ್ಕಾರವು ಪ್ರತ್ಯೇಕ ಟ್ವಿಟರ್ ಖಾತೆಯನ್ನು ರಚಿಸಿದೆ. ಈ ಟ್ವಿಟರ್ ಖಾತೆಯಲ್ಲಿ ಉಕ್ರೇನ್ ಜೊತೆ ಗಡಿಯನ್ನು ಹಂಚಿಕೊಳ್ಳುವ ಹಂಗೇರಿ, ಪೊಲ್ಯಾಂಡ್, ರೊಮೆನಿಯಾ, ಸ್ಲೋವಾಕ್ ಗಣರಾಜ್ಯಗಳ ಸಹಾಯವಾಣಿ ಸಂಖ್ಯೆಗಳನ್ನು ಹಾಕಲಾಗಿದೆ.