ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಉಪಗ್ರಹ ಉಡಾವಣೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ, ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಉಪಗ್ರಹ ಲಾಂಚ್ ಮಾಡಲಾಗುತ್ತಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ಉಡಾವಣೆಗೊಳ್ಳಲಿದೆ ಎಂದು ಹೇಳಿದರು.
1.90 ಕೋಟಿ ವೆಚ್ಚದಲ್ಲಿ ಉಪಗ್ರಹ ಸಿದ್ಧವಾಗುತ್ತಿದೆ. 1.5 ಕೆಜಿ ತೂಕದ ಉಪಗ್ರಹ ಇದಾಗಿದೆ ಎಂದು ತಿಳಿಸಿದರು.