ರಾಮನಗರ: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು 2ನೇ ಹಂತದ ಪಾದಯಾತ್ರೆ ಆರಂಭಿಸಿದ್ದು, ಇದೀಗ 37 ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೋವಿಡ್ ಕಾರಣಗಳಿಂದ ಅರ್ಧಕ್ಕೆ ನಿಂತಿದ್ದ ಮೇಕೆದಾಟು ಪಾದಯಾತ್ರೆ ನಿನ್ನೆಯಿಂದ ರಾಮನಗರದಿಂದ ಆರಂಭವಾಗಿದ್ದು, ಇದೀಗ ಕರ್ನಾಟಕ ಸಾಂಕ್ರಾಮಿಕ ರೋಗದ ನಿಯಮದಡಿ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೆ ಎಫ್ ಐ ಆರ್ ದಾಖಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್, ಶಾಸಕ ಎಸ್.ರವಿ ಸೇರಿದಂತೆ ಒಟ್ಟು 37 ಕಾಂಗ್ರೆಸ್ ನಾಯಕರ ವಿರುದ್ಧ ತಹಶೀಲ್ದಾರ್ ವಿಜಯ್ ಕುಮಾರ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಫ್ ಐಆರ‍್ ದಾಖಲಿಸಿರುವ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಡಿ.ಕೆ.ಶಿವಕುಮಾರ್, ಮೇಕೆದಾಟು ಪಾದಯಾತ್ರೆ 2.0 ಆರಂಭಿಸುತ್ತಿರುವುದಾಗಿ ಸಿಎಂ ಬೊಮ್ಮಾಯಿ ಹಾಗೂ ಅಧಿಕಾರಿಗಳಿಗೂ ಗೊತ್ತಿತ್ತು. ಅನುಮತಿ ಪಡೆದೆ ಪಾದಯಾತ್ರೆ ಆರಂಭಿಸಿದ್ದೆವು. ಆದರೆ ಈಗ ರಾಜಕೀಯ ಧ್ವೇಷಕ್ಕೆ ಎಫ್ ಐ ಆರ್ ದಾಖಲಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.