ಕೀವ್: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿಯೋರ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉಕ್ರೇನ್ ಜತೆಗಿನ ಮಾತುಕತೆ ವಿಫಲ ಬೆನ್ನಲ್ಲೇ ಇಂದು ರಷ್ಯಾ ಕೀವ್ ಹಾಗೂ ಖಾರ್ಕಿವ್ ನಗರದಲ್ಲಿ ತನ್ನ ದಾಳಿ ತೀವ್ರಗೊಳಿಸಿದ್ದು, ಈ ನಡುವೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ಉಕ್ರೇನ್ ಗೆ ವಿದ್ಯಾಭ್ಯಾಸಕ್ಕೆ ತೆರಳಿದ್ದ ಹಾವೇರಿಯ ನವೀನ್ ಎಂಬ ವಿದ್ಯಾರ್ಥಿ ಇಂದು ಬೆಳಿಗ್ಗೆ 10 ಗಂಟೆ ವೇಳೆಯಲ್ಲಿ ರಷ್ಯಾ ನಡೆಸಿದ ದಾಳಿಗೆ ಬಲಿಯಾಗಿದ್ದಾರೆ ಎಂದು ವಿಧಿವಿಜ್ಞಾನ ತಜ್ಞರು ಕೂಡ ಖಚಿತಪಡಿಸಿದ್ದಾರೆ.