ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆದಿದ್ದು, ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಇಂದು ರಾತ್ರಿ ರಷ್ಯಾ ಅಧ್ಯಕ್ಷ ಪುಟಿನ್ ಜೊತೆಗೆ ಮೋದಿ ಚರ್ಚೆ ನಡೆಸಲಿದ್ದು, ಸಂಕಷ್ಟಕ್ಕೆ ಸಿಲುಕಿದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಬಗ್ಗೆ ಚರ್ಚೆ ನಡೆಸಿ ಸಹಕಾರ ಕೋರಲಿದ್ದಾರೆ. ಯುದ್ಧದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಸುರಕ್ಷಿತವಾಗಿ ಭಾರತೀಯರನ್ನು ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮೋದಿ ಮಹತ್ವದ ಚರ್ಚೆ ನಡೆಸುವರು.