ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಯ ಆರನೇ ಹಂತದ ಮತದಾನ ಆರಂಭವಾಗಿದೆ. ಪೂರ್ವ ಉತ್ತರ ಪ್ರದೇಶದ 10 ಜಿಲ್ಲೆಗಳ 57 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಗೋರಖ್ ಪುರದಿಂದ ಸ್ಪರ್ಧಿಸಿದ್ದಾರೆ. 600 ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮತದಾರರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.
ಸಿಎಂ ಆದಿತ್ಯನಾಥ್ ಅವರಲ್ಲದೆ, ಕೃಷಿ ಸಚಿವ ಸೂರ್ಯ ಪ್ರತಾಪ್ ಶಾಹಿ, ಶಿಕ್ಷಣ ಸಚಿವ ಸತೀಶ್ ಚಂದ್ರ ದ್ವಿವೇದಿ, ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್, ರಾಜ್ಯ ಸಚಿವ ರಾಮ್ ಚೌಹಾಣ್ ಮತ್ತು ಜೈ ಪ್ರಕಾಶ್ ನಿಶಾದ್ ಅವರು ಕಣದಲ್ಲಿರುವ ಇತರ ಬಿಜೆಪಿ ಸ್ಪರ್ಧಿಗಳಾಗಿದ್ದಾರೆ.
ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದ ಪ್ರಾಥಮಿಕ ಶಾಲೆ ಗೋರಖ್‌ನಾಥ್ ಕನ್ಯಾನಗರ ಕ್ಷೇತ್ರದಲ್ಲಿ ಮತ ಚಲಾಯಿಸಿ ಮಾತನಾಡಿ, ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಪ್ರಧಾನಿ ಮೋದಿ ನಾಯಕತ್ವದಲ್ಲಿ ಬಿಜೆಪಿ ದಾಖಲೆ ಬರೆಯಲಿದೆ. ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. 80ರಷ್ಟು ಸೀಟುಗಳನ್ನು ಗೆಲ್ಲುತ್ತೇವೆ. ಅಭಿವೃದ್ಧಿ ಮತ್ತು ಭದ್ರತೆಗಾಗಿ ಮತ ನೀಡಿ, ಬಿಜೆಪಿಗೆ ಮತ ನೀಡಿ ಎಂದು ಹೇಳಿದರು.