ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್ ನ ಖಾರ್ಕೀವ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ವಿದ್ಯಾರ್ಥಿಗಳಿಗೆ ದೂರವಾಣಿ ಕರೆ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಧೈರ್ಯ ತುಂಬಿದ್ದು, ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರುವುದಾಗಿ ಭರವಸೆ ನೀಡಿದ್ದಾರೆ.
ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿಯವರಿಗೆ ವಿದ್ಯಾರ್ಥಿಗಳು, ತಾವು ಖಾರ್ಕೀವ್ ನಗರದಿಂದ ಸುಮಾರು 20 ಕಿ.ಮೀ ನಡೆದು ಬಂದಿದ್ದು, ಸಧ್ಯ ಸುರಕ್ಷಿತ ಸ್ಥಳದಲ್ಲಿರುವುದಾಗಿ ತಿಳಿಸಿದ್ದಾರೆ. ಸುಮಾರು 200 ವಿದ್ಯಾರ್ಥಿಗಳು ಇರುವುದಾಗಿ ಹಾಗೂ ತಾವು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಸಿಎಂ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಎಲ್ಲರನ್ನೂ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು. ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ.