ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಕರೆ ಮಾಡಿ 90 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ.
ಸುದೀರ್ಘ 90 ನಿಮಿಷಗಳ ಕಾಲ ಪುಟಿನ್ ಮತ್ತು ಮ್ಯಾಕ್ರನ್ ಸಮಾಲೋಚನೆ ನಡೆಸಿದ್ದು, ಗುರಿ ಸಾಧಿಸುವವರೆಗೂ ನಮ್ಮ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಪುಟಿನ್ ಹೇಳಿದ್ದಾರೆ. ನಮ್ಮ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ. ಉಕ್ರೇನ್ನಲ್ಲಿ ರಾಜಿಯಾಗದ ಹೋರಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಉಕ್ರೇನ್ ನಲ್ಲಿ ರಾಷ್ಟ್ರೀಯತಾವಾದಿಗಳ ವಿರುದ್ಧ ಹೋರಾಡುವುದನ್ನು ಮುಂದುವರಿಸುವುದಾಗಿ ಪುಟಿನ್ ಪ್ರತಿಜ್ಞೆ ಮಾಡಿದ್ದಾರೆ. ರಾಷ್ಟ್ರೀಯ ಸಶಸ್ತ್ರ ಗುಂಪುಗಳ ಉಗ್ರಗಾಮಿಗಳ ವಿರುದ್ಧ ರಾಜಿಯಿಲ್ಲದ ಹೋರಾಟವನ್ನು ಮುಂದುವರಿಸಲು ರಷ್ಯಾ ಉದ್ದೇಶಿಸಿದೆ ಎಂದು ಫ್ರಾನ್ಸ್ ಅಧ್ಯಕ್ಷರಿಗೆ ಪುಟಿನ್ ಸ್ಪಷ್ಟವಾಗಿ ಹೇಳಿದ್ದಾರೆ.