alex Certify BIG BREAKING: 24 ಗಂಟೆಯಲ್ಲಿ 6,300ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 24 ಗಂಟೆಯಲ್ಲಿ 6,300ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 6,396 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಮತ್ತೆ 201 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 514589 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 69897 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 13450 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42367070 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 24,84,412 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,78,29,13,060 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 9,23,351 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...