ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಮ್ಮ ಮೊದಲ ಬಜೆಟ್ ಮಂಡನೆ ಮಾಡಲಿದ್ದು, ಇದಕ್ಕೂ ಮುನ್ನ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಆರ್.ಟಿ. ನಗರದ ನಿವಾಸದ ಬಳಿ ಇರುವ ಶ್ರೀಕಂಠೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವರಿಗೆ ಶಿರಸಾಷ್ಠಾಂಗ ನಮಸ್ಕಾರ ಮಾಡಿದರು.
ಚೊಚ್ಚಲ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ, ಮುಂಜಾನೆಯಿಂದಲೇ ಟೆಂಪಲ್ ರನ್ ಆರಂಭಿಸಿದ್ದು, ಸಮಸ್ತ ರಾಜ್ಯದ ಜನತೆ ಹೆಸರಲ್ಲಿ ಶ್ರೀಕಂಠೇಶ್ವರನಿಗೆ ಅರ್ಚನೆ ಮಾಡಿಸಿದ್ದಾರೆ. ರಾಜ್ಯದ ಜನತೆಗೆ ಸುಖ-ಶಾಂತಿ-ನೆಮ್ಮದಿಯನ್ನು ಕರುಣಿಸುವಂತೆ ಪ್ರಾರ್ಥಿಸಿದ್ದಾರೆ.