ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅರ್ಥವ್ಯವಸ್ಥೆ ಚೇತರಿಕೆಯತ್ತ ಸಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಜನತೆಯ ಮೇಲೆ ತೆರಿಗೆ ಭಾರ ಇನ್ನಷ್ಟು ಹೆಚ್ಚಿಸಲು ಬಯಸುವುದಿಲ್ಲ. ತೆರಿಗೆ ಸಂಗ್ರಹಗಳ ಬಗ್ಗೆ ಇಲಾಖೆಗಳ ಮೇಲೆ ಹೆಚ್ಚಿನ ದಕ್ಷತೆ ತರುವ ನಿಟ್ಟಿನಲ್ಲಿ ಸಂಪನ್ಮೂಲ ಕ್ರೂಢಿಕರಣಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ; ಸ್ವಪಕ್ಷದ ನಾಯಕನ ವಿರುದ್ಧ ಧ್ವನಿ ಎತ್ತಿದ ಸಿಪಿಎಂ ನಾಯಕಿಯರು..!
ರಾಜಸ್ವ ಕೊರತೆ ಅಂದಾಜು 14,699 ಕೋಟಿ, ವಿತ್ತೀಯ ಕೊರತೆ ಅಂದಾಜು 61,564 ಕೋಟಿ ಇದೆ. ಸಾರಿಗೆ ಇಲಾಖೆಗೆ 8,007 ಕೋಟಿ ರಾಜಸ್ವ ಸಂಗ್ರಹ ಗುರಿ, ಅಬಕಾರಿ ಇಲಾಖೆಗೆ 29,000 ಕೋಟಿ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ತೆರಿಗೆ ಸಂಗ್ರಹ ಗುರಿ ಹೊಂದಲಾಗಿದೆ ಎಂದು ಹೇಳಿದರು.