ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ವೈದ್ಯಕೀಯ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿ ಭಾರತಕ್ಕೆ ವಾಪಸ್ ಆದ ಮೆಡಿಕಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ-NMC ಗುಡ್ ನ್ಯೂಸ್ ನೀಡಿದೆ.
ಉಕ್ರೇನ್ ನಿಂದ ಭಾರತಕ್ಕೆ ಮರಳಿರುವ ವೈದ್ಯಕೀಯ ಪದವೀಧರರು 12 ತಿಂಗಳು ಇಂಟರ್ನ್ ಶಿಪ್ ನ್ನು ಭಾರತದಲ್ಲಿಯೇ ಮಾಡಲು ಅವಕಾಶ ನೀಡಲಾಗುವುದು ಎಂದು ತಿಳಿಸಿದೆ.
ಉಕ್ರೇನ್ ನಲ್ಲಿ ಯುದ್ಧದಿಂದಾಗಿ ಹಾಗೂ ಕೋವಿಡ್ ಕಾರಣಾಂತರಗಳಿಂದಾಗಿ ಉಕ್ರೇನ್ ನಲ್ಲಿದ್ದ ಹಲವು ಭಾರತೀಯ ವಿದ್ಯಾರ್ಥಿಗಳು ಇಂಟರ್ನ್ ಶಿಪ್ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಅವಕಾಶ ನೀಡಲಾಗುವುದು ಎಂದು ತಿಳಿಸಲಾಗಿದೆ.
ಭಾರತದಲ್ಲಿ ಇಂಟರ್ನ್ ಶಿಪ್ ಗೆ ನೋಂದಣಿ ಬಯಸುವ ವಿದ್ಯಾರ್ಥಿಗಳು ನ್ಯಾಷನಲ್ ಬೋರ್ಡ್ ಆಫ್ ಎಕ್ಸಾಮಿನೇಷನ್ ನಡೆಸುವ ವಿದೇಶಿ ಮೆಡಿಕಲ್ ಗ್ರಾಜುಯೇಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರಾ ಎಂಬುದನ್ನು ರಾಜ್ಯ ಮೆಡಿಕಲ್ ಕೌನ್ಸಿಲ್ ಖಚಿತಪಡಿಸಿಕೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ಈ ಕುರಿತು ರಾಷ್ಟ್ರೀಯ ವೈದ್ಯಕೀಯ ಆಯೋಗ ತನ್ನ ವೆಬ್ ಸೈಟ್ http://nmc.org.inನಲ್ಲಿ ಸುತ್ತೋಲೆ ಹೊರಡಿಸಿದೆ.